ಧಾರವಾಡ: ತೈಲ ಬೆಲೆ ಏರಿಕೆ ಖಂಡಿಸಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪಕ್ಷದ ರಾಜ್ಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಧಾರವಾಡದ ಕಡಪಾ ಮೈದಾನದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
40-50 ರೂಪಾಯಿಗೆ ಸಿಗಬೇಕಿದ್ದ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು ಕೇಂದ್ರ ಸರ್ಕಾರ 100 ರೂಪಾಯಿಗೆ ತಂದಿಟ್ಟಿದೆ. ದಿನ ಬಳಕೆ ವಸ್ತುಗಳ ದರ ಗಗನಕುಸುಮವಾಗಿದೆ. ಅಧಿಕಾರಕ್ಕೆ ಬಂದ ನಂತರ ನಾನು ಹಾಗೆ ಮಾಡುತ್ತೇನೆ ಹೀಗೆ ಮಾಡುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ಆದರೆ, ಅವರು ಅಧಿಕಾರಕ್ಕೆ ಬಂದ ನಂತರ ಎಲ್ಲ ಬೆಲೆ ಏರಿಕೆ ಆಗಿದೆ. ಮೋದಿ ಬಂದ ನಂತರ ಅಚ್ಛೆ ದಿನ ಜನರಿಗೆ ಬಂದಿಲ್ಲ. ಬದಲಾಗಿದೆ ಕೋಟ್ಯಾಧಿಪತಿಗಳಿಗೆ ಅಚ್ಛೆ ದಿನ ಬಂದಿವೆ. ಸರ್ಕಾರ ಕೂಡಲೇ ದಿನ ಬಳಕೆ ವಸ್ತುಗಳು ಸೇರಿದಂತೆ ತೈಲ ಬೆಲೆಯನ್ನು ಇಳಿಕೆ ಮಾಡಲೇಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಮಂಜುನಾಥ ಜಕ್ಕಣ್ಣವರ ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
10/02/2021 02:51 pm