ಕುಂದಗೋಳ : ತಾಲೂಕಿನಾದ್ಯಂತ ವಾಣಿಜ್ಯ ಮಳಿಗೆ ಹಾಗೂ ಕಿರು ಮಳಿಗೆಗಳಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡದಂತೆ ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದ ಬಳಿಕ ಧ್ವಜಗಳನ್ನು ಎಲ್ಲೇಂದರಲ್ಲಿ ಎಸೆಯದಂತೆ ಸೂಕ್ತ ಕ್ರಮ ಜರುಗಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಮಂಜುನಾಥ ಏಂಟ್ರೂವಿ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಅವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರ ಧ್ವಜಕ್ಕೆ ವಿಶೇಷ ಗೌರವ ಇದ್ದು, ಈ ಅಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ದಿನ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಹೆಚ್ಚಾಗಿದೆ. ಈ ಬಗ್ಗೆ ಕಳೆದ ನಾಲ್ಕು ವರ್ಷದಿಂದ ಜನಜಾಗೃತಿ ಕೈಗೊಂಡರು ಸಾರ್ವಜನಿಕರು ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಖರೀದಿ ಬಗ್ಗೆ ಜಾಗೃತಿ ಅವಶ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಕಲ್ಲಪ್ಪ ಹರಕುಣಿ, ರೈತ ಸಂಘ ತಾಲೂಕು ಅಧ್ಯಕ್ಷ ನಾಗರಾಜ ತಾಮ್ರಗುಂಡಿ, ಬಾಬಾಜಾನ್ ಮುಲ್ಲಾ, ಶಂಕ್ರಣ್ಣ ಕಟಗಿ ಇತರರು ಉಪಸ್ಥಿತರಿದ್ದರು.
Kshetra Samachara
04/08/2021 07:01 pm