ಧಾರವಾಡ: ಅಳ್ನಾವರ ತಾಲೂಕಿನ ಹೂಲಿಕೆರೆಯಿಂದ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಳ್ನಾವರ ಭಾಗದ ರೈತರು ಮಾಜಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹೂಲಿಕೆರೆ ಒಡೆದು ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಕಳೆದ ಎರಡು ವರ್ಷಗಳಿಂದ ಈ ರೀತಿ ಹಾನಿಯಾಗುತ್ತಲೇ ಇದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಆಗುತ್ತಿಲ್ಲ. ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ 20 ಕೋಟಿಯಷ್ಟು ಹಾನಿಯಾಗಿದೆ ಹಾಗೂ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 30 ಕೋಟಿಯಷ್ಟು ಹಾನಿಯಾಗಿದೆ ಎಂದು ಲಾಡ್ ಹೇಳಿದರು.
ಪ್ರಸಕ್ತ ವರ್ಷ ಕೂಡ ಹೂಲಿಕೆರೆ ಒಡೆದ ಪರಿಣಾಮ ಅನೇಕ ರೈತರು ಸಾಕಷ್ಟು ನಷ್ಟ ಅನುಭವಿಸಬೇಕಾಗಿದೆ. ಕೂಡಲೇ ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.
Kshetra Samachara
09/08/2021 03:07 pm