ನವಲಗುಂದ : ತಾಲೂಕಿನ ಗುಮ್ಮಗೋಳ ತಾಲೂಕಿನ ಬಸ್ ನಿಲ್ದಾಣದ ಬಳಿಯ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗಾಗಿ ಪ್ರಗತಿಯಲ್ಲಿದ್ದ ಕಾಮಗಾರಿಯನ್ನು ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ತೆರವುಗೊಳಿಸುವ ಕಾರ್ಯಾಚರಣೆಗೆ ಬುಧವಾರ ಮುಂದಾಗಿತ್ತು.
ಇನ್ನು ಈ ಕಾರ್ಯಾಚರಣೆಗೆ ಸಾಕಷ್ಟು ಅಧಿಕಾರಿಗಳು ಮತ್ತು ನೂರಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗಾಗಿ ಪ್ರಗತಿಯಲ್ಲಿದ್ದ ಕಾಮಗಾರಿಯನ್ನು ತೆರವುಗೊಳಿಸುವ ಸಂಧರ್ಭದಲ್ಲಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಸಹ ಉಂಟಾಗಿತ್ತು.
Kshetra Samachara
11/08/2021 08:51 pm