ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳು ಶೀಘ್ರವೇ ಫಲಾನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತ ಪಡಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ರಹಿತ ಸ್ಲಮ್ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರಿಂದ ಅನುದಾನ ನೀಡೋದನ್ನ ತಡೆ ಹಿಡಿದಿದ್ದರು. ನಂತರ ನಮ್ಮ ಪಕ್ಷ ಅಧಿಕಾರಕ್ಕೆ ಬಂದಮೇಲೆ ಸಮರ್ಪಕ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಸಂಪೂರ್ಣವಾಗಿ ಮುಗಿಸಿದ್ದೇವೆ. ಇನ್ನೂ ಕೆಲವೇ ದಿನಗಳಲ್ಲಿ ಆಶ್ರಯ ಮನೆಗಳ ಉಪಯೋಗವನ್ನ ಜನ ಫಲಾನುಭವಿಗಳು ಪಡೆಯಲಿದ್ದಾರೆ ಎಂದು ತಿಳಿಸಿದರು.

ಇನ್ನೂ ಹು-ಧಾ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಎದ್ದು ಸ್ಪರ್ಧೆ ಮಾಡಿದಂತಹ ಅಭ್ಯರ್ಥಿಗಳನ್ನ ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಪ್ರತಿಕ್ರಿಯಿಸಿದ ಅವರು, ವಾರ್ಡ್ ಭಾಗದಲ್ಲಿ ಸ್ಥಳೀಯರ ಸಲಹೆ ಪಡೆದು ಪಕ್ಷದ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾವು ಯಾವ ಅಭ್ಯರ್ಥಿಗೂ ಟಿಕೆಟ್ ಕೊಡ್ತೇವೇ ಎಂದು ಆಶ್ವಾಸನೆ ನೀಡಿರಲಿಲ್ಲ. ಆದರೆ ಆಕಾಂಕ್ಷಿಗಳ ಸಂಖ್ಯೆಯೆ ಹೆಚ್ಚಾಗಿದ್ದರಿಂದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿತ್ತು ಆದ್ದರಿಂದ ಕೆಲವರು ಪಕ್ಷದ ವಿರುದ್ಧ ಬಂಡಾಯ ಎದ್ದು ಸ್ಪರ್ಧೆ ಮಾಡಿದ್ದರು. ಅಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ತೀರ್ಮಾನ ಮಾಡಲಾಗುವುದು ಎಂದರು.

Edited By : Manjunath H D
Kshetra Samachara

Kshetra Samachara

13/09/2021 12:17 pm

Cinque Terre

38.09 K

Cinque Terre

9

ಸಂಬಂಧಿತ ಸುದ್ದಿ