ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಇಂಧನ, ಅಡುಗೆ ಎಣ್ಣೆ ಬೆಲೆ ಇಳಿಸದಿದ್ದಲ್ಲಿ ಜೆಡಿಎಸ್ ಪಕ್ಷದಿಂದ ಉಗ್ರ ಹೋರಾಟ

ಕುಂದಗೋಳ : ಡಿಸೇಲ್, ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ ಬೆಲೆಯನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿರುವ ಕೇಂದ್ರ ರಾಜ್ಯ ಬಿಜೆಪಿ ಸರ್ಕಾರದ ಧೋರಣೆಯನ್ನು ವಿರೋಧಿಸಿ ಜೆಡಿಎಸ್ ತಾಲೂಕು ಅಧ್ಯಕ್ಷ ಶಂಕರಗೌಡ ದೊಡಮನಿ ಇಂದು ಪ್ರತಿಭಟನೆ ನಡೆಸಿ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕುಂದಗೋಳ ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನ ಬೆಲೆ ಹಾಗೂ ಅಡುಗೆ ಎಣ್ಣೆ ಬೆಲೆ ಇಳಿಕೆ ಮಾಡಿದ್ದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸರ್ವ ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

14/09/2021 05:20 pm

Cinque Terre

24.76 K

Cinque Terre

0

ಸಂಬಂಧಿತ ಸುದ್ದಿ