ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭವಿಷ್ಯದ ಕಲ್ಪನೆ ಆಧರಿಸಿ ನಗರಗಳ ವಿನ್ಯಾಸ ರಚನೆ:ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದೇಶದಲ್ಲಿ ನಗರಗಳ ಬೆಳವಣಿಗೆ ತೀವ್ರಗತಿಯಲ್ಲಿದೆ. ಪ್ರಸ್ತುತ 50:50 ಅನುಪಾತದ ಹಂಚಿಕೆಯಲ್ಲಿ ಜನರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ನಗರಗಳ ಕಡೆ ವಲಸೆ ಬರುವವರ ಪ್ರಮಾಣವು ಹೆಚ್ಚಿದೆ. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು 2047 ರಲ್ಲಿ ಭಾರತ ಹೇಗಿರಬೇಕು? ಎಂಬ ಕಲ್ಪನೆಯನ್ನು ರೂಪಿಸಿದ್ದಾರೆ. ಇದರಂತೆ ಭವಿಷ್ಯದ ಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ನಗರಗಳ ವಿನ್ಯಾಸದ ರಚನೆಯಾಗಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನವನಗರದಲ್ಲಿನ ಹುಡಾ ಕಚೇರಿ ಆವರಣದಲ್ಲಿ ಲಾಟರಿ ಮೂಲಕ ಹಂಚಿಕೆ ಮಾಡಲಾದ ತಡಸಿನಕೊಪ್ಪ ಗ್ರಾಮದ ರಿ.ಸ.ನಂ 41 ರಿಂದ 50 ಕ್ಷೇತ್ರದಲ್ಲಿನ 786 ನಿವೇಶನ ಹಕ್ಕು ಪತ್ರಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ. ನೂತನ ಅಧ್ಯಕ್ಷರು ಕ್ರಿಯಾಶೀಲವಾಗಿ ಕೆಲಸ ಮಾಡುವುದರೊಂದಿಗೆ ಹೊಸ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಚೆನ್ನಮ್ಮ ವೃತ್ತದ ಫ್ಲೈ ಓವರ್ ನಿರ್ಮಾಣದಲ್ಲಿ ಜನಪ್ರತಿನಿಧಿಗಳಿಗೆ ಯಾವುದೇ ಪ್ರತಿಷ್ಠೆ ಇಲ್ಲ. ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಆಕ್ಷೇಪಣೆಗಳನ್ನು ಗಮನದಲ್ಲಿ ಇರಿಸಿ ಯೋಜನೆಯ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ನೇಮಿಸಲಾಗಿದೆ. ಐ.ಐ.ಟಿ. ಬಿ.ವ್ಹಿ.ಬಿ ಸೇರಿದಂತೆ ಪ್ರತಿಷ್ಠಿತ ಸಂಸ್ಥೆಗಳಲ್ಲಿನ ಇಂಜಿನಿಯರ್ಸ್, ಖಾಸಗಿ ನಿರ್ಮಾತೃಗಳು ಸಮಿತಿಯಲ್ಲಿ ಇದ್ದು ವಾರದಲ್ಲಿ ವರದಿ ನೀಡಲಿದ್ದಾರೆ. ನಂತರ ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಎಂದರು.

Edited By : Nirmala Aralikatti
Kshetra Samachara

Kshetra Samachara

06/11/2021 07:14 pm

Cinque Terre

21.37 K

Cinque Terre

0

ಸಂಬಂಧಿತ ಸುದ್ದಿ