ಲಕ್ಷ್ಮೇಶ್ವರ: ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಸಾವಿರಾರು ವಿದ್ಯಾರ್ಥಿಗಳು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಬಸ್ ಸ್ಟ್ಯಾಂಡ್ ಎದುರಿಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಲಕ್ಷ್ಮೇಶ್ವರ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ವಿದ್ಯಾರ್ಥಿಗಳು ಲಕ್ಷ್ಮೇಶ್ವರ ಹಾಗೂ ಗದಗಿಗೆ ಹೋಗುತ್ತಿದ್ದು ಸಮರ್ಪಕ ಬಸ್ಸಿನ ವ್ಯವಸ್ಥೆ ಇಲ್ಲದೇ ದಿನನಿತ್ಯವೂ ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಈ ಕುರಿತು ಡಿಪೋ ಮ್ಯಾನೇಜರ್ ಅವರಿಗೆ ಮನವಿ ಕೊಟ್ಟರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಈ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
Kshetra Samachara
24/11/2021 12:31 pm