ಕುಂದಗೋಳ : ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಆರೋಗ್ಯಯುತ ಜೀವನ ಕ್ರಮಕ್ಕೆ ಶುದ್ಧ ಕುಡಿಯುವ ನೀರಿನ ಅಗತ್ಯವಿದೆ, ಆ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಲ ಜೀವನ ಮಿಷನ್ ಕಾಮಗಾರಿ ಆರಂಭಿಸಿ ಪ್ರತಿ ಹಳ್ಳಿ ಮನೆಗೆ ನೀರು ಒದಗಿಸುತ್ತಿರುವ ಯೋಜನೆ ಶ್ಲಾಘನೀಯ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ 2 ಕೋಟಿ 2 ಲಕ್ಷ ವೆಚ್ಚದ ಜಲ ಜೀವನ್ ಮಷಿನ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಘನ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಗ್ರಾಮ ಗ್ರಾಮಗಳಲ್ಲೂ ಸಾಕಾರಗೊಳ್ಳಲಿ ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಿರಿ ಎಂದರು.
ಈ ಸಂದರ್ಭದಲ್ಲಿ ಯರೇಬೂದಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.
Kshetra Samachara
20/01/2022 08:56 pm