ಕುಂದಗೋಳ : ತಾಲೂಕಿನ ಪಶುಪತಿಹಾಳ ಗ್ರಾಮದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ 146 ಲಕ್ಷ ಮೊತ್ತದ ಜಲ ಜೀವನ್ ಮಷಿನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಸೌಲಭ್ಯ ಪಡೆಯುವಂತೆ ತಿಳಸಿದರು.
ಬಳಿಕ ಪಶುಪತಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10.60 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕಟ್ಟಡವನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಶಾಲಾ ಶಿಕ್ಷಕರಿಂದ ಸನ್ಮಾನ ಸ್ವೀಕರಿಸಿ, ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಲಾ ಸಿಬ್ಬಂದಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.
Kshetra Samachara
22/01/2022 10:36 am