ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಶಾಸಕಿ ಕುಸುಮಾವತಿ ಚಾಲನೆ

ಕುಂದಗೋಳ : ಶಾಸಕಿ ಕುಸುಮಾವತಿ ಶಿವಳ್ಳಿಯವರು ಕುಂದಗೋಳ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಶರೇವಾಡ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂಪಾಯಿ ವೆಚ್ಚದ ಜಲ ಜೀವನ್ ಮಷಿನ್ ಕಾಮಗಾರಿ ಹಾಗೂ ಇನಾಂ ವೀರಾಪುರ ಗ್ರಾಮದಲ್ಲಿ 16 ಲಕ್ಷ ಮೊತ್ತದ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕಿ ಕುಸುಮಾವತಿ ಶಿವಳ್ಳಿ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ, ಪ್ರತಿಯೊಂದು ಕಾಮಗಾರಿ ಭೂಮಿ ಪೂಜೆ ನಂತರ ಗ್ರಾಮಸ್ಥರ ಪಾಲಿಗೆ ಸೇರುತ್ತದೆ ನೀವೂ ಅದನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಶರೇವಾಡ ಮತ್ತು ಇನಾಂ ವೀರಾಪುರ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

25/01/2022 02:31 pm

Cinque Terre

17.37 K

Cinque Terre

0

ಸಂಬಂಧಿತ ಸುದ್ದಿ