ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಮುನೇಕೊಪ್ಪ

ಅಣ್ಣಿಗೇರಿ : ತಾಲೂಕಿನ ಭದ್ರಾಪುರ, ನಲವಡಿ,ಹಾಗೂ ಮನಕವಾಡ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಧಾರವಾಡ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

ಇನ್ನು ದೇಶದ ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ ತಾಲೂಕಿನ ಗ್ರಾಮಗಳಾದ ಭದ್ರಾಪುರ ಗ್ರಾಮದಲ್ಲಿ ಅಂದಾಜು ಮೊತ್ತ163 ಲಕ್ಷ, ನಲವಡಿ ಗ್ರಾಮದಲ್ಲಿ ಅಂದಾಜು ಮೊತ್ತ 202 ಲಕ್ಷ ಹಾಗೂ ಮನಕವಾಡ ಗ್ರಾಮದಲ್ಲಿ ಅಂದಾಜು ಮೊತ್ತ 99 ಲಕ್ಷ 75 ಸಾವಿರ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಲ್ಲ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಎಲ್ಲ ಇಲಾಖೆಯ ಅಧಿಕಾರಿಗಳು, ಗ್ರಾಮದ ಗುರುಹಿರಿಯರು ಮುಖಂಡರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

25/01/2022 03:02 pm

Cinque Terre

19.95 K

Cinque Terre

2

ಸಂಬಂಧಿತ ಸುದ್ದಿ