ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಟ್ರಕ್ ಟರ್ಮಿನಲ್ ನಿರ್ಮಾಣದಿಂದ ವಾಣಿಜ್ಯ ಚಟುವಟಿಕೆ, ಗ್ರಾಮಸ್ಥರ ಆದಾಯ ಹೆಚ್ಚಳ: ಸಚಿವ ಮುನೇನಕೊಪ್ಪ

ಹುಬ್ಬಳ್ಳಿ: ಟ್ರಕ್ ಟರ್ಮಿನಲ್ ನಿರ್ಮಾಣದಿಂದ ಅಂಚಟಗೇರಿ ಗ್ರಾಮ ಭಾರತದ ಭೂಪಟದಲ್ಲಿ ಗುರುತಿಸಲ್ಪಡುತ್ತದೆ. ವಾಣಿಜ್ಯ ಚಟುವಟಿಕೆಗಳು ವೃದ್ಧಿಸುತ್ತವೆ. ಗ್ರಾಮದ ಜಮೀನಿಗೆ ಉತ್ತಮ ಬೆಲೆ ಬರುತ್ತದೆ. ಗ್ರಾಮಸ್ಥರ ಆದಾಯ ಹೆಚ್ಚಳವಾಗುತ್ತದೆ. ಸರ್ಕಾರದ ಈ ಯೋಜನೆ ಕೈತಪ್ಪಿ ಹೋಗದಂತೆ ಗ್ರಾಮಸ್ಥರು ಯೋಚಿಸಬೇಕು ಎಂದು ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಹೇಳಿದರು.

ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿಂದು ಅಂಚಟಗೇರಿ ಟ್ರಕ್ ಟರ್ಮಿನಲ್ ನಿರ್ಮಾಣದ ಕುರಿತು ಏರ್ಪಡಿಸಲಾದ ತಿಳುವಳಿಕೆ ಸಭೆಯಲ್ಲಿ ಅವರು ಮಾತನಾಡಿದರು.

ಮುಂದಿನ‌ ಭವಿಷ್ಯದ ದೃಷ್ಟಿಯಿಂದ ಉತ್ತಮ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅಂಚಟಗೇರಿ ಹುಬ್ಬಳ್ಳಿ ಮಹಾನಗರಕ್ಕೆ ಸಮೀಪದ ಗ್ರಾಮವಾಗಿದೆ. ಸರ್ಕಾರ ಗ್ರಾಮದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಬದ್ದವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ, ಕಾಲೇಜು ಹಾಗೂ ಸ್ಮಶಾನಕ್ಕಾಗಿ ಜಮೀನು ನೀಡುವಂತೆ ಮಾಡಿದ್ದ ಮನವಿಗೆ ಸ್ಪಂದಿಸಲಾಗಿದೆ. ಜಿಲ್ಲಾಧಿಕಾರಿ ಸ್ಮಶಾನಕ್ಕಾಗಿ ಜಾಗ ಮಂಜೂರು ಮಾಡಿದ್ದಾರೆ. ಗ್ರಾಮಸ್ಥರಿಗೆ ತೊಂದರೆಯಾಗದಂತೆ ಟರ್ಮಿನಲ್ ನಿರ್ಮಾಣದ ಕೆಲಸ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರನ್ನು ತರಲು ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಅಂಚಟಗೇರಿ ಗ್ರಾಮಕ್ಕೂ ಶುದ್ಧ ಕುಡಿಯುವ ನೀರು ನೀಡಲಾಗುವುದು. ಹುಬ್ಬಳ್ಳಿ ಶಹರದಂತೆ ಅಂಚಟಗೇರಿ ಗ್ರಾಮ ಬೆಳವಣಿಗೆಯಾಗಬೇಕು. ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಯೋಜನೆಯ ಅನುಷ್ಠಾನಕ್ಕೆ ಮುಕ್ತ ಮನಸ್ಸಿನಿಂದ ಒಪ್ಪಿಗೆ ನೀಡಬೇಕು ಎಂದು ಅವರು ಮನವಿ ಮಾಡಿದರು.

Edited By : Nagaraj Tulugeri
Kshetra Samachara

Kshetra Samachara

30/01/2022 03:07 pm

Cinque Terre

90.98 K

Cinque Terre

1

ಸಂಬಂಧಿತ ಸುದ್ದಿ