ನವಲಗುಂದ : ನವಲಗುಂದ ತಾಲೂಕಿನ ನಾಗನೂರ ಗ್ರಾಮದಲ್ಲಿ ಸುಮಾರು 83 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಂದ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಈ ವೇಳೆ ಗ್ರಾಮದಲ್ಲಿ ಕೊರೋನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು.
Kshetra Samachara
13/04/2022 12:50 pm