ಧಾರವಾಡ: ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅಮೃತ ದೇಸಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿದರು. ಇವರಿಬ್ಬರಿಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರು ಸಾಥ್ ನೀಡಿದ್ದು ವಿಶೇಷವಾಗಿತ್ತು.
ಹೆಬ್ಬಳ್ಳಿ ಗ್ರಾಮದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ದೊಡ್ಡ ಗ್ರಾಮ. ಈ ಗ್ರಾಮದಲ್ಲಿ ಬೆಚಗೇರಿ ರಸ್ತೆ ನಿರ್ಮಾಣ, ಗ್ರಾಮೀಣ ಕುಡಿಯುವ ನೀರು ಜಲಜೀವನ ಮಿಷನ್ ಯೋಜನೆ, ಲೋಕೋಪಯೋಗಿ ಇಲಾಖೆಯ ನಾಲ್ಕು ಶಾಲಾ ಕೊಠಡಿ ಉದ್ಘಾಟನೆ, ಒಂದು ಅಂಗನವಾಡಿ ಕಟ್ಟಡ ನಿರ್ಮಾಣ, ಗಡ್ಡಿಹಾಳ ರಸ್ತೆ ನಿರ್ಮಾಣ, ಗಂಗಣ್ಣ ದಾರಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಶಾಸಕ ಸಿ.ಟಿ.ರವಿ ಕೂಡ ಈ ಕೆಲಸಕ್ಕೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರಿಗೆ ಕೈ ಜೋಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಇಡೀ ದೇಶದಲ್ಲಿ 3 ಲಕ್ಷ 44 ಕೋಟಿ ರೂಪಾಯಿ ವೆಚ್ಚದಲ್ಲಿ ಜಲ ಜೀವನ ಮಿಷನ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಒಟ್ಟಾರೆಯಾಗಿ ಹೆಬ್ಬಳ್ಳಿ ಗ್ರಾಮದಲ್ಲಿ ಒಂದೇ ದಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆತಿದ್ದು, ವಿವಿಧ ಹಂತದ ಅಧಿಕಾರಿಗಳು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
30/04/2022 10:41 pm