ಕಲಘಟಗಿ: ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಂದಪುರಿ ಮಹಾಸ್ವಾಮಿಗಳ ಸತ್ಯಾಗ್ರಹ ಬೆಂಬಲಿಸಿ ಎಸ್ಸಿ-ಎಸ್ಟಿ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಪಟ್ಟಣದಲ್ಲಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಹೋರಾಟ ನಡೆಯಿತು.
ಪಟ್ಟಣದ ಎಪಿಎಂಸಿಯಿಂದ ತಾಲೂಕ ತಹಶೀಲ್ದಾರ್ ಕಛೇರಿವರೆಗೆ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು.
ತಾಲೂಕ ಉಪ ತಹಶೀಲ್ದಾರ್ ರವೀಂದ್ರ ಹಾದಿಮನಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವಾಲ್ಮೀಕಿ ನಾಯಕ ಸಮಾಜದ ಯುವ ಮುಖಂಡ ರಮೇಶ್ ಸೋಲಾರಗೋಪ್ಪ ನಿವೃತ್ತ ನ್ಯಾಯಮೂರ್ತಿ ನಾಗ ಮೋಹನದಾಸ್ ವರದಿ ಜಾರಿಯಾಗಬೇಕು. ಸರ್ಕಾರಕ್ಕೆ ವರದಿ ಸಲ್ಲಿಸಿದರೂ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನದ ಬದ್ಧವಾಗಿ ಮೀಸಲಾತಿ ನೀಡಿಲ್ಲ. ಕರ್ನಾಟಕ ರಾಜ್ಯ ಪರಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ವಾಲ್ಮೀಕಿ ಗುರುಪೀಠದ ಶ್ರೀಗಳು ಬೆಂಗಳೂರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದಿಗೆ 100 ದಿನಗಳು ಕಳೆದರೂ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವರದಿ: ಉದಯ ಗೌಡರ
Kshetra Samachara
20/05/2022 11:06 pm