ಕುಂದಗೋಳ : ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಮಳೆಯಿಂದಾದ ಸಮಸ್ಯೆಗಳು ಒಂದೆರಡಲ್ಲ.
ಇನ್ನು ನಿರಂತರ ಮಳೆಯಿಂದ ಸಾಕಷ್ಟು ತೊಂದರೆ ಅನುಭವಿಸಿದ ಯರೇಬೂದಿಹಾಳ ಗ್ರಾಮಕ್ಕೆ ಶಾಸಕಿ ಕುಸುಮಾವತಿ ಶಿವಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೌದು ! ಶಾಸಕಿ ಕುಸುಮಾವತಿ ಶಿವಳ್ಳಿ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಹಾಗೂ ಅತಿವೃಷ್ಟಿ ನೋಡಲ್ ಅಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರ ನೇತೃತ್ವದಲ್ಲಿ ಯರೇಬೂದಿಹಾಳ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಜನ ಅನುಭವಿಸಿದ ಪರಿಸ್ಥಿತಿಯನ್ನು ಅವಲೋಕಿಸಿದರು.
ಗ್ರಾಮಕ್ಕೆ ಬೃಹತ್ ಪ್ರಮಾಣದಲ್ಲಿ ನೀರು ನುಗ್ಗಲು ಕಾರಣವಾದ ಮಾರ್ಗ ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಹೊಲದಲ್ಲಿ ನೀರು ನುಗ್ಗಿದ ಕೆಲ ರೈತರು ಪಿಡಿಓ ವಿರುದ್ಧ ಹರಿಹಾಯ್ದು ಸೂಕ್ತ ಕ್ರಮ ಕೈಗೊಳ್ಳದಿರುವ ಬಗ್ಗೆ ಆರೋಪ ಮಾಡಿದರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಗ್ರಾಮದಲ್ಲಿ ನುಗ್ಗುವ ನೀರಿನ ಹರಿವಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವ ಕುರಿತು ಮಾರ್ಗ ಕಂಡುಕೊಳ್ಳುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಕೆಲ ಮನೆ ಕಳೆದುಕೊಂಡ ನಿರಾಶ್ರಿತರು ಶಾಸಕಿ ಕುಸುಮಾವತಿ ಶಿವಳ್ಳಿಗೆ ಫೋಟೋ ತೋರಿಸಿ ಪರಿಹಾರ ಕೇಳಿದರು ಶಾಸಕಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
Kshetra Samachara
21/05/2022 10:40 pm