ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಂಧನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಅನ್ನದಾತ: ಜಿಲ್ಲೆಯಾದ್ಯಂತ ಬಿಸಿಮುಟ್ಟಿಸಿದ ಮುಷ್ಕರದ ನಿರ್ಧಾರ

ಹುಬ್ಬಳ್ಳಿ: ಬ್ಯಾಂಕಿಂಗ್ ವಹಿವಾಟಿನಲ್ಲಿ ಆಗುತ್ತಿರುವ ತೊಂದರೆ ತಪ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ತೈಲ ಖರೀದಿ ನಿಲ್ಲಿಸುವ ಮೂಲಕ ಮೇ 31ರಂದು ಪ್ರತಿಭಟನೆ ನಡೆಸಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ಧಾರವಾಡ ಜಿಲ್ಲಾದ್ಯಾಂತ ಪೆಟ್ರೋಲ್ ಬಂಕ್ ಗಳ ಮುಂದೆ ವಾಹನ ಸವಾರರು ಬೀಡುಬಿಟ್ಟಿದ್ದಾರೆ. ಕೃಷಿ ಚಟುವಟಿಕೆಗಳನ್ನು ಬದಿಗಿಟ್ಟು ಅನ್ನದಾತ ಇಂಧನಕ್ಕಾಗಿ ಸರದಿ ಸಾಲಿನಲ್ಲಿ ನಿಂತಿದ್ದಾನೆ.

ಹೌದು.ಬೆಲೆ ಏರಿಳಿತದಿಂದ ಡೀಲರ್​ಗಳಿಗೆ ರಕ್ಷಣೆ ಒದಗಿಸಬೇಕು, ಬೇಡಿಕೆಯಷ್ಟು ತೈಲ ಪೂರೈಸಬೇಕು ಮತ್ತು ಬ್ಯಾಂಕಿಂಗ್ ವಹಿವಾಟಿನಲ್ಲಿ ಆಗುತ್ತಿರುವ ತೊಂದರೆ ತಪ್ಪಿಸಲು ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ತೈಲ ಖರೀದಿ ನಿಲ್ಲಿಸುವ ಮೂಲಕ ಮೇ 31ರಂದು ಪ್ರತಿಭಟನೆ ನಡೆಸಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧಾರ ಕೈಗೊಂಡಿದ್ದಾರೆ. ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್‌ ಕಂಪನಿಗಳ ನಿರ್ವಹಣೆಯಲ್ಲಿ ಆಗುತ್ತಿರುವ ವೈಫಲ್ಯದಿಂದಾಗಿ ಪೆಟ್ರೋಲ್ ಬಂಕ್ ಮಾಲೀಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ಡೀಲರ್​ಗಳು ಹೇಳಿದ್ದಾರೆ.

ಈಗಾಗಲೇ ಧಾರವಾಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಮುಂಗಾರು ಚುರುಕುಗೊಂಡಿದೆ. ಜಿಲ್ಲೆಯ ನವಲಗುಂದ, ಕುಂದಗೋಳ, ಕಲಘಟಗಿ , ಅಳ್ನಾವರ ಮುಂತಾದ ಕಡೆಗಳಲ್ಲಿ ಭೂಮಿಯನ್ನು ಹದ ಮಾಡಲಾಗುತ್ತಿದೆ. ಇನ್ನೂ ಬಿತ್ತನೆ ಕಾರ್ಯ ಸಹ ಮಾಡಲಾಗುತ್ತದೆ. ಆದರೆ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೂ ಪೆಟ್ರೋಲ್ ಬಂಕ್ ಮುಂದೆ ನೂರಾರು ಟ್ರಾಕ್ಟರ್, ಲಾರಿ ಇತರ ವಾಹನಗಳು ಸಾಲು ಸಾಲು ನಿಲ್ಲುವ ದೃಶ್ಯಗಳು ಸಾಮಾನ್ಯವಾಗಿವೆ.

Edited By : Shivu K
Kshetra Samachara

Kshetra Samachara

30/05/2022 03:16 pm

Cinque Terre

32.12 K

Cinque Terre

1

ಸಂಬಂಧಿತ ಸುದ್ದಿ