ಅಣ್ಣಿಗೇರಿ:ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಎಂಟು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಣ್ಣಿಗೇರಿ ತಾಲೂಕು ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಕಾಸ ತೀರ್ಥ ಬೈಕ್ ರ‍್ಯಾಲಿಗೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಪಟ್ಟಣದ ವಿವೇಕಾನಂದ ಸರ್ಕಲ್ ನಲ್ಲಿ ರಿಬ್ಬನ್ ಕಟ್ ಮಾಡಿ ಸ್ವತಃ ಬೈಕ್ ಚಾಲನೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ವೇಳೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಷಣ್ಮುಖ ಗುರಿಕಾರ್, ಶಿವಾನಂದ ಹೊಸಳ್ಳಿ, ಶಿವಯೋಗಿ ಸುರಕೋಡ, ಮಹೇಶ ಸುಣಗಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಬೈಕ್ ರ‌್ಯಾಲಿಯಲ್ಲಿ ಭಾಗವಹಿಸಿದ್ದರು.
Kshetra Samachara
26/06/2022 04:14 pm