ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತಿಭಟನಾ ಸ್ಥಳಕ್ಕೆ ಬಂದ ಮೇಯರ್: ಪೌರ ಕಾರ್ಮಿಕರಿಗೆ ಕೊಟ್ಟ ಭರವಸೆ ಏನು ಗೊತ್ತಾ?

ಧಾರವಾಡ: ಪೌರ ಕಾರ್ಮಿಕರನ್ನು ಕಾಯಂ ಕಾರ್ಮಿಕರನ್ನಾಗಿ ನೇಮಕ ಮಾಡಿಕೊಳ್ಳಬೇಕು ಹಾಗೂ ಅವರಿಗೂ ಶಾಸನಬದ್ಧವಾದ ಸವಲತ್ತುಗಳನ್ನು ನೀಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಮೇಯರ್ ಈರೇಶ ಅಂಚಟಗೇರಿ ಭೇಟಿ ನೀಡಿದರು.

ಕಳೆದ ನಾಲ್ಕು ದಿನಗಳಿಂದ ಪೌರ ಕಾರ್ಮಿಕರು ಈ ಧರಣಿ ಆರಂಭಿಸಿದ್ದು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಮೇಯರ್ ಈರೇಶ ಅಂಚಟಗೇರಿ ನೀಡಿದರು.

ಪೌರ ಕಾರ್ಮಿಕರ ಧರಣಿ ಸ್ಥಳಕ್ಕೆ ಬಂದ ಅವರು, ಕಾರ್ಮಿಕರ ಮನವಿ ಆಲಿಸಿದರು. ನಂತರ ಕಾರ್ಮಿಕರ ಈ ಬೇಡಿಕೆ ಸಲುವಾಗಿಯೇ ಧಾರವಾಡದಲ್ಲಿ ಸಾಮಾನ್ಯ ಸಭೆ ಕರೆದು ಬೇಡಿಕೆ ಈಡೇರಿಸುವ ಬಗ್ಗೆ ತೀರ್ಮಾನಿಸಲಾಗುವುದು. ಸದ್ಯಕ್ಕೆ ತಮ್ಮ ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು.

ಮೇಯರ್ ಅವರ ಭರವಸೆಗೆ ಒಪ್ಪದ ಕಾರ್ಮಿಕರು, ಸ್ಪಷ್ಟ ಆದೇಶ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

04/07/2022 09:05 pm

Cinque Terre

31.11 K

Cinque Terre

0

ಸಂಬಂಧಿತ ಸುದ್ದಿ