ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಶಾಸಕ ಕೋನರೆಡ್ಡಿ

ಅಣ್ಣಿಗೇರಿ: ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಅಣ್ಣಿಗೇರಿ ಪಟ್ಟಣ ಸೇರಿ ತಾಲೂಕಿನಾದ್ಯಂತ ಅನಾಹುತಗಳು ಸಂಭವಿಸಿವೆ. ಮನೆ ಗೋಡೆಗಳು ಕುಸಿದು ಮನೆಯಲ್ಲಿದ್ದ ಒಬ್ಬ ಬಾಲಕಿಗೆ ಗಂಭೀರ ಗಾಯಗಳಾಗಿ ಅವಾಂತರ ಸೃಷ್ಟಿಯಾಗಿದೆ.

ಮಾಜಿ ಶಾಸಕರಾದ ಎನ್ ಎಚ್ ಕೋನರೆಡ್ಡಿ ಅವರು ಬೆಳ್ಳಂಬೆಳಗ್ಗೆ ಪಟ್ಟಣದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಮನೆ ಬಿದ್ದು ದೊಡ್ಡ ಪ್ರಮಾಣದಲ್ಲಿ ಪೆಟ್ಟಾಗಿರುವ ಬಾಲಕಿಯ ಮನೆಗೆ ಭೇಟಿ ನೀಡಿ ಹಣ ಸಹಾಯ ಮಾಡಿ ಆಸ್ಪತ್ರೆಗೆ ಕಳಿಸಿಕೊಟ್ಟು ಮಾನವೀಯತೆ ಮೆರೆದರು. ಸ್ವತಃ ಬೈಕ್ ಏರಿದ ಮಾಜಿ ಶಾಸಕರು ಪಟ್ಟಣದ ಎಲ್ಲ ಭಾಗಗಳಲ್ಲಿ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಧೈರ್ಯ ತುಂಬಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/09/2022 11:21 am

Cinque Terre

49.63 K

Cinque Terre

0

ಸಂಬಂಧಿತ ಸುದ್ದಿ