ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಜಲಾವೃತ ಪ್ರದೇಶಕ್ಕೆ ಭೇಟಿ ನೀಡಿದ ಉಸ್ತುವಾರಿ ಸಚಿವ; ನಿವಾಸಿಗಳಿಗೆ ಸಾಂತ್ವನ

ಹುಬ್ಬಳ್ಳಿ: ನಿನ್ನೆ ಸೋಮವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹುಬ್ಬಳ್ಳಿ ಧಾರವಾಡದ ಜನ ತತ್ತರಿಸಿ ಹೋಗಿದ್ದರು. ಮಳೆ ಅವಾಂತರದಿಂದ ಅದೆಷ್ಟೋ ತೊಂದರೆಗಳನ್ನು ಅನುಭವಿಸುತ್ತಿದ್ದರು. ತೆಗ್ಗು ಪ್ರದೇಶಗಳಾದ ಹಳೇ ಹುಬ್ಬಳ್ಳಿಯಲ್ಲಿ ಮಳೆಯಿಂದಾಗಿ ಸಾಕಷ್ಟು ಬಡಾವಣೆಗಳಲ್ಲಿ ಮನೆ ಒಳಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಇಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ ಜಲಾವೃತಗೊಂಡಿದ್ದ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಸಾಂತ್ವನ ಹೇಳಿ, ಆದಷ್ಟು ಬೇಗ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಪಾಲಿಕೆ ಆಯುಕ್ತ, ಗೋಪಾಲಕೃಷ್ಣ, ಅಧಿಕಾರಿಗಳು ಉಪಸ್ಥಿತಿಯಲ್ಲಿದ್ದರು.

Edited By : Manjunath H D
Kshetra Samachara

Kshetra Samachara

11/10/2022 09:13 pm

Cinque Terre

23.06 K

Cinque Terre

3

ಸಂಬಂಧಿತ ಸುದ್ದಿ