ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ. ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು 2022ರ ನವೆಂಬರ್ 14ರಿಂದ ಪ್ರತಿ ನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.
ಟಿಕೆಟ್ ಬುಕ್ಕಿಂಗ್ ಕೂಡ ಇಗಾಗಲೇ ಪ್ರಾರಂಭವಾಗಿದೆ. ಸೇವೆ ಪ್ರಾರಂಭಿಸಿದ ಇಂಡಿಗೋ ಆಡಳಿತ ಮಂಡಳಿಗೆ ಧನ್ಯವಾದಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟ್ವೀಟ್ ಮಾಡಿದ್ದಾರೆ.
ಸಮಯ ಹೀಗಿದೆ
ದೆಹಲಿ - ಹುಬ್ಬಳ್ಳಿ 10:00 – 12:45
ಹುಬ್ಬಳ್ಳಿ - ದೆಹಲಿ 13:15 – 15:45
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/10/2022 02:59 pm