ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಯೋಗೀಶಗೌಡ ಗೌಡರ ಕೊಲೆ ವಿಚಾರವಾಗಿ ಸಿಬಿಐ ತನ್ನ ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಸಕ ಅಮೃತ ದೇಸಾಯಿ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಮೃತ ದೇಸಾಯಿ ಹಾಗೂ ವಿನಯ ಕುಲಕರ್ಣಿ ಅವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟು ಕೊನೆಗೆ ಅಮೃತ ದೇಸಾಯಿ ಜಯ ಗಳಿಸಿದ್ದರು.
ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ವಿನಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಆರೋಪಿಸುತ್ತಿದ್ದಾರೆ. ಧಾರವಾಡದ ಉಪನಗರ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಸಕ ಅಮೃತ ದೇಸಾಯಿ ಅವರ ಮನೆಗೂ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Kshetra Samachara
05/11/2020 03:08 pm