ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಪಶ್ಚಿಮ ಪದವೀಧರ ಚುನಾವಣಾ ಮತ ಎಣಿಕೆ ಸಕಲ ವ್ಯವಸ್ಥೆ :ಅಗತ್ಯ ಬಂದೋಬಸ್ತ್

ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಅಕ್ಟೋಬರ್ 28 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು ಅದಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣೆ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್ ಹೇಳಿದ್ದಾರೆ.

ಮತ ಎಣಿಕೆ ನಡೆಯುವ ನಗರದ ಕೃಷಿ ವಿಶ್ವವಿದ್ಯಾಲಯ ಸ್ಥಳಕ್ಕೆ ಭೇಟಿ ನೀಡಿ ಮತ ಎಣಿಕಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಅವರು,ಒಟ್ಟು 52 ಸಾವಿರ 68 ಮತಗಳ ಚಲಾವಣೆಗೊಂಡಿದ್ದು,ಮತ ಎಣಿಕೆಗಾಗಿ ಎರಡು ಕೊಠಡಿಗಳನ್ನು ನಿಗದಿಗೊಳಿಸಲಾಗಿದೆ.ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು,ಪ್ರತಿ ಕೊಠಡಿಯ 14 ಟೇಬಲ್ ಗಳಲ್ಲಿ ಮತ ಎಣಿಕಾ ಕಾರ್ಯ ಕೈಗೊಳಲಾಗುವುದು.ಮತ ಎಣಿಕೆ ಕಾರ್ಯಕ್ಕಾಗಿ ಒಟ್ಟು 64 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಮತ ಎಣಿಕೆ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು ಮೂರು ಹಂತದ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ರ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದ್ದು,ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ ಎಣಿಕೆ ಏಜೆಂಟ್ ರುಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್,ಪಲ್ಸ್ ಆ್ಯಕ್ಸಿ ಮೀಟರ್ ವ್ಯವಸ್ಥೆ ಮಾಡಲಾಗಿದ್ದು,ಕೊರೊನಾ ಸೋಂಕಿತ ಅಥವಾ ಸಂಕಿತರಿಗೆ ಪ್ರತ್ಯೇಕ ಐಸೋಲೇಶನ್ ವ್ಯವಸ್ಥೆ ಮಾಡಲಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

09/11/2020 09:54 pm

Cinque Terre

39.84 K

Cinque Terre

0

ಸಂಬಂಧಿತ ಸುದ್ದಿ