ಧಾರವಾಡ: ಯೋಗೀಶ್‌ಗೌಡ ಅವರ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ. ಇದರಿಂದಾಗಿ ಮಾಜಿ ಸಚಿವರು ಇನ್ನೊಂದು ವಾರ ಜೈಲಿನಲ್ಲಿಯೇ ಕಾಲ ಕಳೆಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಧಾರವಾಡ ಕಲ್ಯಾಣ ನಗರದಲ್ಲಿರುವ ವಿನಯ್ ಕುಲಕರ್ಣಿ ಮನೆ ಮೇಲೆ ಕಳೆದ ತಿಂಗಳು ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಮಾಜಿ ಸಚಿವರು ತಮಗೆ ಜಾಮೀನು ನೀಡುವಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅವರ ಪರ ವಕೀಲರು ವಾಪಸ್ ಪಡೆದು ಮತ್ತೆ ಅರ್ಜಿ ಸಲ್ಲಿಸಿದ್ದರು.
ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ನಲ್ಲಿ ನವೆಂಬರ್ 23ರಂದು ವಿನಯ್ ಅವರ ನ್ಯಾಯಾಂಗ ಬಂಧನ ವಿಚಾರಣೆ ಇತ್ತು. ಈ ವೇಳೆ ಸಿಬಿಐ ಅಧಿಕಾರಿಗಳು ಕೋರ್ಟಿಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಹಿಂಡಲಗಾ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ವಿನಯ್ ವಿಚಾರಣೆಗೆ ಹಾಜರಾದರು. ಇದರ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಡಿಸೆಂಬರ್ 4ಕ್ಕೆ ಮುಂದೂಡಿದೆ.
Kshetra Samachara
27/11/2020 05:09 pm