ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಹತ್ಯೆ ಪ್ರಕರಣ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯಗೊಳ್ಳಲಿದೆ.
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರನ್ನು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಜೈಲಾಧಿಕಾರಿಗಳು ಮಧ್ಯಾಹ್ನ 12ರಿಂದ 4 ಗಂಟೆಯೊಳಗೆ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
Kshetra Samachara
07/12/2020 07:45 am