ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಿನ್ನೆಯಷ್ಟೆ ಧಾರವಾಡದ ಮೂರನೇ ಹೆಚ್ಚುವರಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಇಂದು ವಿನಯ್ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಯೋಗೀಶ್‌ಗೌಡ ಕೊಲೆ ಆರೋಪದಡಿ ವಿನಯ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿ, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಟ್ಟಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ವಿನಯ್ ಅವರು ಸೆರೆವಾಸ ಅನುಭವಿಸುತ್ತಿದ್ದಾರೆ.
Kshetra Samachara
15/12/2020 08:49 pm