ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿನಯ್‌ಗೆ ಡಿ.28ರವರೆಗೂ ಜೈಲೂಟವೇ ಗತಿ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಡಿ.28ರವರೆಗೂ ಜೈಲೂಟವೇ ಗತಿಯಾಗಿದೆ.

ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅವರನ್ನು ಸಿಬಿಐ ಅಧಿಕಾರಿಗಳು ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.28ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿತು. ಇದೇ ಪ್ರಕರಣದಡಿ ಬಂಧಿತರಾಗಿರುವ ವಿನಯ್ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿ ಕೂಡ ಡಿ.28ಕ್ಕೆ ಮುಕ್ತಾಯಗೊಳ್ಳಲಿದೆ.

Edited By : Vijay Kumar
Kshetra Samachara

Kshetra Samachara

21/12/2020 04:58 pm

Cinque Terre

52.32 K

Cinque Terre

0

ಸಂಬಂಧಿತ ಸುದ್ದಿ