ಧಾರವಾಡ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಪಿಎಸ್ಐ ಅಭ್ಯರ್ಥಿಗಳು ಧಾರವಾಡದಲ್ಲಿ ಮತ್ತೆ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಅಭ್ಯರ್ಥಿಗಳು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪಿಎಸ್ಐ ನೇಮಕಾತಿಯಲ್ಲಿ ಹಲವು ಕುಳಗಳು ಭಾಗಿಯಾಗಿರುವುದು ಈಗಾಗಲೇ ಗೊತ್ತಾಗಿದೆ. ಕೂಡಲೇ ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಿ, ಅಕ್ರಮ ನೇಮಕಾತಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದರು.
2016 ರಿಂದ ಇಲ್ಲಿಯವರೆಗೆ ನಡೆದ ನೇಮಕಾತಿ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಎಫ್‌ಡಿಎ ಅಕ್ರಮ ನೇಮಕಾತಿಯನ್ನು ಸಿಐಡಿ ತನಿಖೆಗೆ ವಹಿಸಬೇಕು. ಪಿಸಿ ವಯೋಮಿತಿಯನ್ನು 27 ರಿಂದ 33ಕ್ಕೆ ಏರಿಕೆ ಮಾಡಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಅಭ್ಯರ್ಥಿಗಳು ಒತ್ತಾಯಿಸಿದರು.
ಈ ಪಿಎಸ್ಐ ಅಕ್ರಮ ನೇಮಕಾತಿ ಹಿಂದೆ ಅಮೃತ್ ಪಾಲ್ ಅಷ್ಟೇ ಅಲ್ಲದೇ ಇನ್ನೂ ಅನೇಕರಿದ್ದಾರೆ. ಅವರ ಬಗ್ಗೆಯೂ ಜನತೆಗೆ ಸತ್ಯ ಗೊತ್ತಾಗಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಭಟನಾನಿರತ ಪಿಎಸ್ಐ ಅಭ್ಯರ್ಥಿಗಳು ಒತ್ತಾಯಿಸಿದರು.
Kshetra Samachara
13/07/2022 02:42 pm