ಹುಬ್ಬಳ್ಳಿ : ಹಿಜಾಬ್ ವಿವಾದದಲ್ಲಿ ಭಾವೈಕ್ಯತೆ ಸಾಕ್ಷಿಯಾಗಿದ್ದ ಹುಬ್ಬಳ್ಳಿ ಧಾರವಾಡದಲ್ಲಿ ಈಗಾ ಹಿಜಾಬ್ ದಳ್ಳುರಿಗೆ ಸಾಥ್ ನೀಡುವ ಪ್ರವೃತಿ ಆರಂಭವಾಗಿದೆ.
ಇನ್ನು ಕೋರ್ಟ್ ನಲ್ಲಿ ಹಿಜಾಬ್ ವಿವಾದದ ಚರ್ಚೆಯ ನಡುವೆಯೇ ಇಂದು ಕಾಲೇಜುಗಳು ಪುನಾರಂಭವಾಗಿವೆ. ಇನ್ನು ಹುಬ್ಬಳ್ಳಿಯಲ್ಲಿಂದು ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ ಘಟನೆ ಹುಬ್ಬಳ್ಳಿಯ ಜೆ.ಸಿ. ನಗರದ ವುಮೆನ್ಸ್ ಕಾಲೇಜಿನ ಆವರಣದಲ್ಲಿ ನಡೆದಿದೆ.
ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಒಳಗೆ ಬನ್ನಿ ಇಲ್ಲದಿದ್ದರೆ ಕಾಲೇಜು ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದನ್ನು ಖಂಡಿಸಿ, ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಾವು ಹಿಜಾಬ್ ತೆಗೆಯೋಲ್ಲ, ಹಿಜಾಬ್ ಹಾಕಿಕೊಂಡೆ ಕಾಲೇಜಿಗೆ ಬರುತ್ತೇವೆ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದರು. ಪ್ರತಿಭಟನಾ ಸಂದರ್ಭದಲ್ಲಿ ಕಾಲೇಜು ಮುಂದೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/02/2022 12:30 pm