ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಭೆಗೆ ಆಹ್ವಾನಿಸಿದ ಸಿಎಂ: ಧರಣಿ ಕೈಬಿಟ್ಟ ಅನ್ನದಾತರು

ಧಾರವಾಡ: ರಾಜ್ಯದ 22 ಜಿಲ್ಲೆಗಳಿಗೆ ಪ್ರಮುಖ ಕಚೇರಿಯಾದ ಧಾರವಾಡದ ಕರ್ನಾಟಕ ನೀರಾವರಿ ನಿಗಮದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಕಚೇರಿಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ರೈತ ಸೇನಾ ಕರ್ನಾಟಕದ ರೈತ ಮುಖಂಡರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ನಿನ್ನೆ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತ ಮುಖಂಡರು ಮನವಿ ಮಾಡಿದ್ದು, ಜುಲೈ 6 ರಂದು ಕಾಫಿ ಬೋರ್ಡ್ನಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳೋಣ ಎಂಬ ಭರವಸೆ ನೀಡಿದ್ದರಿಂದ ರೈತ ಮುಖಂಡರು ಇದೀಗ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಕರ್ನಾಟಕ ನೀರಾವರಿ ನಿಗಮದಲ್ಲಿ ದೊಡ್ಡ ದೊಡ್ಡ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದು, ಈ ಸಂಬಂಧ ರಾಜ್ಯಪಾಲರನ್ನೂ ಭೇಟಿ ಮಾಡಿ ಅವರ ಗಮನಕ್ಕೆ ತರಲಾಗಿದೆ. ಈ ಸಂಬಂಧ ಮಾತನಾಡುವುದಕ್ಕಾಗಿ ಸಿಎಂ ಸಭೆ ಕರೆದಿದ್ದು, ಈ ಹಿನ್ನೆಲೆಯಲ್ಲಿ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ರೈತ ಮುಖಂಡರು ತಿಳಿಸಿದರು.

Edited By : Somashekar
Kshetra Samachara

Kshetra Samachara

27/06/2022 07:37 pm

Cinque Terre

61.29 K

Cinque Terre

2

ಸಂಬಂಧಿತ ಸುದ್ದಿ