ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿದ್ದ ಹಿಂದೂಯೇತರ ಅಂಗಡಿಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಇಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದಿದ್ದಾರೆ. ಮುಸ್ಲಿಂ ವ್ಯಾಪಾರಿ ನಬಿಸಾಬ್ ಅವರಿಗೆ ಸೇರಿದ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರಿಂದ ಜನಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಮಾಜದಲ್ಲಿ ಜಾತಿ, ಜಾತಿಗಳ ನಡುವೆ ಅನೇಕ ಶಕ್ತಿಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ. ಹನುಮಪ್ಪನಿಗೆ ಎಲ್ಲರೂ ಭಕ್ತರೇ ಆಗಿದ್ದಾರೆ. ಎಲ್ಲರ ಮೈಯಲ್ಲೂ ಕೆಂಪು ರಕ್ತವೇ ಹರಿಯುತ್ತಿದೆ. ಆದರೆ, ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ನಡೆಯುತ್ತಿದ್ದರೂ ಸರ್ಕಾರಗಳು ಸುಮ್ಮನೆ ಕುಳಿತಿವೆ. ಕೂಡಲೇ ಸರ್ಕಾರ ಹಾಗೂ ಪೊಲೀಸ್ ಇಲಾಖೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಹಾಗೂ ಕಲ್ಲಂಗಡಿ ನಷ್ಟ ಅನುಭವಿಸಿದ ವ್ಯಾಪಾರಸ್ಥನಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/04/2022 12:37 pm