ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪೂರ್ವ ನಿಯೋಜಿತ ಯಾರೇ ಇದ್ದರೂ ಕ್ರಮ ಖಚಿತ : ನಳೀನಕುಮಾರ್ ಕಟೀಲ

ಹುಬ್ಬಳ್ಳಿ : ಹುಬ್ಬಳ್ಳಿಯ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಇದರ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಖಚಿತ. ಎಐಎಂಐಎಂ ಪಕ್ಷವೇ ಆಗಲಿ ಇತರ ಸಂಘಟನೆಗಳಾಗಲಿ ಪೊಲೀಸರು ಕ್ರಮ ಕೈಗೊಳ್ಳತ್ತಿದ್ದಾರೆ.

ಇದೊಂದು ಭಾವನೆಗಳಿಂದ ಕೆರಳಿದ ಘಟನೆ ಅಲ್ಲ ದೇವಾಲಯಗಳ ಮೇಲೆ, ಪೊಲೀಸರ ಮೇಲೆ ದಾಳಿಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಗಲಭೆಗೆ ಯಾರೇ ಕಾರಣರಾದವರನ್ನು ಸಹ ನಾವು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಹೇಳಿದರು.

ನಗರದಲ್ಲಿಂದು ದೇವಸ್ಥಾನಕ್ಕೆ ಹಾಗೂ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ವೇಳೆ ಮಾಧ್ಯಮದ ಜೊತೆಗೆ ಅವರು ಮಾತನಾಡಿದರು. ಸಿದ್ಧರಾಮಯ್ಯ ಓರ್ವ ಅಸಮರ್ಥ ರಾಜಕಾರಣಿ. ಅವರು ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳೇ ಈಗಿನ ಕೋಮು ಗಲಭೆಗಳಿಗೆ ಕಾರಣ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆದೆವು.

ಕೇರಳದಿಂದಲೂ ಬಂದು ಇಲ್ಲಿ ಗಲಭೆಗಳನ್ನು ಸೃಷ್ಟಿಸಿದರು. ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಬಿಟ್ಟು ಸಾಫ್ಟ್ ಕಾರ್ನರ್ ತೋರಿಸಿದರು. ಅಪರಾಧಿಗಳಿಗೆ ಬಿಡುಗಡೆ ಭಾಗ್ಯ ನೀಡಿದರು. ಅಂದು ಜೈಲಿನಿಂದ ಬಿಡುಗಡೆ ಮಾಡಿದ್ದೇ ಇಂದು ಗಲಭೆಗಳಿಗೆ ಪ್ರೇರಣೆಯಾಗಿದೆ. ಇಂಥವರು ನಮ್ಮ ಸರ್ಕಾರದ ಬಗ್ಗೆ ಮಾತಾಡ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಕಿಡಿ ಕಾರಿದರು.

Edited By :
Kshetra Samachara

Kshetra Samachara

26/04/2022 12:22 pm

Cinque Terre

27.86 K

Cinque Terre

6

ಸಂಬಂಧಿತ ಸುದ್ದಿ