ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಧ್ವಜ ಸಂಹಿತೆ ತಿದ್ದುಪಡಿಯಿಂದ ದೇಶಕ್ಕೆ ಅನ್ಯಾಯ; ಹರಿಹಾಯ್ದ ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ: ಧ್ವಜ ಸಂಹಿತೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದಲ್ಲಿ ಅನ್ಯಾಯ ಮಾಡುತ್ತಿದೆ. ಖಾದಿಯಿಂದ ತಯಾರಿಸಬೇಕಾದ ಧ್ವಜವನ್ನು ಪಾಲಿಸ್ಟರ್ ಬಟ್ಟೆಯಲ್ಲೂ ತಯಾರಿಸಲು ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ರಾಷ್ಟ್ರ ಧ್ವಜ ಸಂಹಿತೆ ತಿದ್ದುಪಡಿಯಿಂದ ಕೋಟ್ಯಂತರ ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ವಿಧಾನ‌ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

ನಗರದಲ್ಲಿಂದು ಬೆಂಗೇರಿ ಖಾದಿ ಗ್ರಾಮೋದ್ಯೋಗ ಘಟಕಕ್ಕೆ ಭೇಟಿ ನೀಡಿ, ವೀಕ್ಷಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಧ್ವಜ ಸಂಹಿತೆ ತಿದ್ದುಪಡಿಯಿಂದ ಕೇಂದ್ರ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ ಎಂದರು.

ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗದಲ್ಲಿ ಅನೇಕ‌ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ರೆ, ಈ ತಿದ್ದುಪಡಿ ಮಾಡುವ ಮೂಲಕ ಉದ್ಯೋಗದಲ್ಲಿರುವವರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದಾರೆ. ಕೂಡಲೇ ಈ ಧ್ವಜ ಸಂಹಿತೆ ತಿದ್ದುಪಡಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜ ತಯಾರಿಸುವುದು ಸರಿಯಲ್ಲ. ರಾಷ್ಟ್ರ ಧ್ವಜ ಖಾದಿ ಬಟ್ಟೆಯಿಂದಲೇ ತಯಾರಾಗಬೇಕು. ಧ್ವಜ ಸಂಹಿತೆ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

Edited By : Somashekar
Kshetra Samachara

Kshetra Samachara

11/07/2022 03:06 pm

Cinque Terre

95.13 K

Cinque Terre

19

ಸಂಬಂಧಿತ ಸುದ್ದಿ