ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ಸಲುವಾಗಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಇನ್ನೂ ಸಾಕಷ್ಟು ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತದೆ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಈ ಕ್ರೌರ್ಯವನ್ನು ಹದ್ದುಬಸ್ತಿನಲ್ಲಿಡಬೇಕು. ಸರ್ಕಾರ ಈ ವಿಷಯದಲ್ಲಿ ವಿಫಲವಾಗುತ್ತಿದೆ. ಕೊಲೆ, ಹಲ್ಲೆ, ಗಲಾಟೆಗಳಾದಾಗ ಉಗ್ರವಾದ ಹೇಳಿಕೆಗಳು ಕೇಳಿ ಬರುತ್ತವೆ. ಹೇಳಿಕೆ ನಂತರ ಮುಂದೆ ಯಾವುದೇ ಕ್ರಮ ಆಗುತ್ತಿಲ್ಲ ಎಂದರು.
ಇದೇ ಕಾರಣಕ್ಕೆ ಇಂದು ಪ್ರವೀಣ್ ಹತ್ಯೆಯಾಗಿದೆ. ಇದು ಕಾನೂನು, ಸರ್ಕಾರದ ವೈಫಲ್ಯ. ಬಿಜೆಪಿಗೆ ಹಿಂದೂಗಳ ಸುರಕ್ಷತೆ, ಕಾಳಜಿಯಿದ್ದಲ್ಲಿ ಎಸ್ಡಿಪಿಐ, ಪಿಎಫ್ಐ ಬ್ಯಾನ್ ಮಾಡಬೇಕು. ಹತ್ಯೆ ಹಿಂದೆ ಕೇರಳದ ಮೂಲ ಇದೆ ಎಂದು ಹೇಳಲಾಗುತ್ತಿದೆ. ಮುಸ್ಲಿಂರು ಮಾಡಿರುವ ಲಕ್ಷಾಂತರ ಕೊಲೆಗಳಿಗೆ ನಾವು ತಿರುಗಿ ಬಿದ್ರೆ ದೇಶದಲ್ಲಿ ಒಬ್ಬನೂ ಮುಸ್ಲಿಂ ಇರಬಾರದು. ಆದರೆ, ಕೊಲೆಗೆ ಕೊಲೆಯೇ ಉತ್ತರವಲ್ಲ. ನ್ಯಾಯಕ್ಕೆ ನ್ಯಾಯಾಲಯ ಇದೆ. ಸಂವಿಧಾನಬದ್ಧ ಹೋರಾಟಕ್ಕೆ ಅವಕಾಶ ಇದೆ ಎಂದರು.
ಮುಲ್ಲಾ, ಮೌಲ್ವಿಗಳು, ಎಸ್ಡಿಪಿಐ, ಪಿಎಫ್ಐ ಸಂಘಟನೆಗಳನ್ನು ಹದ್ದುಬಸ್ತಿನಲ್ಲಿಡಬೇಕು. ಬಿಜೆಪಿಯವರು ಮುಸ್ಲಿಂ ವೋಟಿಗಾಗಿ ಅಲ್ಲಾಡುತ್ತಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳು ಬಿಜೆಪಿಯ ಭದ್ರಕೋಟೆಗಳು ಆದರೆ, ಆ ಕೋಟೆಯೊಳಗೆ ಹೊಕ್ಕು ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ಇದನ್ನೆಲ್ಲ ನಿಯಂತ್ರಿಸಲು ಆಗದೇ ಇದ್ದರೆ ಸಿಎಂ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/07/2022 02:24 pm