ಹುಬ್ಬಳ್ಳಿ: ಹೈಕೋರ್ಟ್ ಧಾರವಾಡ ಪೀಠದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯುವ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಾರ್ಡ್ ನಂ.51 ರ ಪಾಲಿಕೆ ಕಾಂಗ್ರೆಸ್ ಸದಸ್ಯ ಎಸ್.ಸಂದೀಲ್ ಕುಮಾರ ಅವರು ಪಾಲ್ಗೊಳ್ಳುವುದಕ್ಕೆ ಅವಕಾಶ ಇಲ್ಲ ಎಂದು ಪಾಲಿಕೆ ಪರಿಷತ್ತು ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಹೌದು.ಎಸ್.ಸಂದಿಲ್‌ಕುಮಾರ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆ ಸ್ಪರ್ಧಿಸಿದ ಆರೋಪ ಇದ್ದು, ಇನ್ನೂ ಕೋರ್ಟ್ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಇಂದು ನಡೆಯುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ನಿರ್ಬಂಧವನ್ನು ಈಗಾಗಲೇ ಸೂಚನಾ ಪತ್ರ ಕಳುಹಿಸಲಾಗಿದೆ.
ಆದರೆ ಹೈಕೋರ್ಟ್ ಪೀಠದ ಆದೇಶದನ್ವಯ ಪಾಲಿಕೆ ಸದಸ್ಯ ಎಸ್.ಸಂದೀಲ್ ಕುಮಾರ ಮಹಾನಗರ ಪಾಲಿಕೆ ಯಾವುದೇ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ಪಾಲಿಕೆ ಪರಿಷತ್ತು ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
Kshetra Samachara
29/07/2022 10:26 am