ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ವರದಿ ಬೆನ್ನಲ್ಲೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕೈ ನಾಯಕರು: ಧ್ವಜಕ್ಕೆ ಅವಮಾನ ಬೇಡ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಸರ್ಕಾರ ಮತ್ತು ಸ್ಥಳೀಯ ಆಡಳಿತ ನೆಪ ಮಾತ್ರಕ್ಕೆ ಮಾಡುತ್ತಿವೆ ಎಂಬ ಆರೋಪವನ್ನು ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಸಾಬೀತು ಮಾಡಲು ಮುಂದಾಗಿದೆ. ಈಗಾಗಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿರುವ ಕುರಿತು ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ.

ಹೌದು..ಹರ್ ಘರ್ ತಿರಂಗಾ ಅಭಿಯಾನದಡಿ ಮನೆ-ಮನೆಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ವಿತರಣೆ ಮಾಡುತ್ತಿರುವ ಧ್ವಜದಲ್ಲಿ ದೋಷ ಇವೆ ಎಂದು ಅಖಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ ದೀಪಕ್ ಚಿಂಚೋರೆ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೂ ದೋಷ ಕಂಡು ಬಂದ ಧ್ವಜಗಳನ್ನ ವಾಪಸ್ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರಿ ಸಂಸ್ಥೆಗಳೇ ದೋಷಪೂರಿತ ಧ್ವಜ ವಿತರಿಸಿ ತಿರಂಗಕ್ಕೆ ಅವಮಾನ ಮಾಡುತ್ತಿದೆ. ಭಾರತ 75 ವರ್ಷಗಳ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಆಚರಣೆ ಮಾಡುತ್ತಿದ್ದು, ತನ್ನಿಮಿತ್ತ ಪ್ರಧಾನಿ ನರೇಂದ್ರ ಮೋದಿಯವರು, ಹರ್ ಘರ್ ತಿರಂಗಾ ಅಭಿಯಾನ ಘೋಷಿಸಿದ್ದರು. ಆ.13ರಿಂದ 15ರವರೆಗೆ ದೇಶದ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಕರೆ ನೀಡಿದ್ದರು. ಆದರೆ ಬೇಕಾಬಿಟ್ಟಿಯಾಗಿ ಧ್ವಜ ತಯಾರಿಸಿ ವಿತರಣೆ ಮಾಡುತ್ತಿರುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Edited By : Somashekar
Kshetra Samachara

Kshetra Samachara

12/08/2022 03:34 pm

Cinque Terre

24.54 K

Cinque Terre

0

ಸಂಬಂಧಿತ ಸುದ್ದಿ