ನವಲಗುಂದ : ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಅವರು ಜೆಡಿಎಸ್ ನಲ್ಲಿದ್ದಾಗ ನವಲಗುಂದದಲ್ಲಿ ಜೆಡಿಎಸ್ ಪಕ್ಷ ಗಟ್ಟಿಯಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದಾಗಿನಿಂದ ನವಲಗುಂದದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ ಅನ್ನೋ ಮಾತುಗಳು ಸಾಮಾನ್ಯವಾಗಿವೆ.
ಆದರೆ ಈಗ ನವಲಗುಂದದಲ್ಲಿ ಜೆಡಿಎಸ್ ಸಕ್ರಿಯವಾಗತೊಡಗಿದ್ದು, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಕೀರಗೌಡ ದೊಡ್ಡಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಅವರ ನೇತೃತ್ವದಲ್ಲಿ ನವಲಗುಂದ ತಹಶೀಲ್ದಾರ್ ಗೆ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಶೀಘ್ರ ಪರಿಹಾರ ವಿತರಿಸುವಂತೆ ತಹಸೀಲ್ದಾರ್ ಮೂಲಕ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
'ಹೆಸರು ಬೆಳೆಗೆ ವಿಮೆ ತುಂಬಿಸಿಕೊಳ್ಳುವ ಅವಧಿ ವಿಸ್ತರಿಸಬೇಕು. ಹಾನಿಯಾದ ಹೆಸರು ಬೆಳೆಗೆ ಎಕರೆಗೆ ₹25,000 ಪರಿಹಾರ ನೀಡಬೇಕು. ಹಾನಿಗೊಂಡ ಮನೆಗಳಿಗೆ ಪರಿಹಾರ ವಿತರಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು' ಎಂದು ಎಚ್ಚರಿಸಿದರು.
ಒಟ್ಟಿನಲ್ಲಿ ಇನ್ನೇನು ಚುನಾವಣೆ ಹತ್ತಿರವಾಗತೊಡಗಿದ್ದು, ರಾಜಕೀಯ ಕಾವು ಹೆಚ್ಚಾಗುತ್ತಿದೆ. ಈ ಬಾರಿ ನವಲಗುಂದ ಮತ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಸದೃಢಗೊಳಿಸಲು ಪ್ರಯತ್ನಿಸುತ್ತಿರುವ ಎಲ್ಲಾ ಚಟುವಟಿಕೆಗಳು ಸಹ ಈಗಾಗಲೇ ಆರಂಭವಾಗಿವೆ ಎನ್ನಬಹುದು.
ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ
Kshetra Samachara
13/08/2022 04:15 pm