ಹುಬ್ಬಳ್ಳಿ: ವಾಣಿಜ್ಯನಗರಿ ಜನರ ಕುತೂಹಲವನ್ನು ಮತ್ತಷ್ಟು ಕೆರಳಿಸುವಂತೆ ಮಾಡಿರುವ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ ನಿರ್ಧಾರ ಈಗ ಪಾಲಿಕೆ ಮುಂದಿದೆ. ನಾಳೆ ನಡೆಯಲಿರುವ ಸಾಮಾನ್ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು, ಹೋರಾಟಕ್ಕೆ ಜಯ ಸಿಗುವುದೋ ಇಲ್ಲವೋ..? ಹೋರಾಟ ಮುಂದುವರೆಯುವುದೋ ಎಂಬುವಂತ ಮಾತು ಎಲ್ಲೆಡೆಯೂ ಕೇಳಿ ಬರುತ್ತಿದೆ.
ಇಷ್ಟು ದಿನ ತಣ್ಣಗಿದ್ದ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಮುನ್ನಲೆಗೆ ಬರುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದದ ಬಳಿಕ ಹುಬ್ಬಳ್ಳಿಯಲ್ಲೂ ವಿವಾದ ಹುಟ್ಟಿಕೊಂಡಿದ್ದು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಕೊರಿ ಗಜಾನನ ಮಂಡಳಿ ಮನವಿ ಮಾಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಸಾಕಷ್ಟು ಹೋರಾಟ ನಡೆದಿದ್ದು, ದಿನವೂ ಒಂದಿಲ್ಲೊಂದು ರೀತಿಯಲ್ಲಿ ಒತ್ತಾಯದ ಮಾತು ಕೇಳಿ ಬರುತ್ತಿದೆ. ಆದರೆ ಪಾಲಿಕೆ ಮಾತ್ರ ಇನ್ನೂ ತನ್ನ ಸ್ಪಷ್ಟ ನಿರ್ಧಾರವನ್ನು ಬಿಚ್ಚಿಟ್ಟಿಲ್ಲ. ಇದರ ಮಧ್ಯದಲ್ಲಿ ಈಗ ನಾಳೆ ನಡೆಯಲಿರುವ ಸಾಮಾನ್ಯ ಸಭೆಯಲ್ಲಿ ಬಹುತೇಕ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಇನ್ನೂ ದಶಕಗಳ ಕಾಲ ಹುಬ್ಬಳ್ಳಿಯನ್ನು ಹೊತ್ತಿ ಉರಿಯುವಂತೆ ಮಾಡಿತ್ತು ಹುಬ್ಬಳ್ಳಿಯ ಈದ್ಗಾ ವಿವಾದ. ಹುಬ್ಬಳ್ಳಿಯ ಈದ್ಗಾ ಮೈದಾನದಕ್ಕಾಗಿ 90ರ ದಶಕದಲ್ಲಿ ನಡೆದ ಹೋರಾಟದಿಂದ ಘಟಾನುಘಟಿ ನಾಯಕರಗಳು ಅಧಿಕಾರದ ಗದ್ದುಗೆ ಏರಿದ್ರೆ, ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿದ್ದ ಉಮಾ ಭಾರತಿ, ಮುಖ್ಯಮಂತ್ರಿ ಸ್ಥಾನವನ್ನೇ ಕಳೆದುಕೊಂಡ್ರು. ಹುಬ್ಬಳ್ಳಿಯ ಈದ್ಗಾ ಮೈದಾನದ ಹೋರಾಟ ಅಷ್ಟೊಂದು ರಣ ರೋಚಕ ಇತಿಹಾಸವನ್ನು ಹೊಂದಿದೆ. ಆದ್ರೇ ದಶಕದ ಹಿಂದೆಯೇ ಹುಬ್ಬಳ್ಳಿಯ ಈದ್ಗಾ ವಿವಾದಕ್ಕೆ ಅಂತ್ಯ ಹಾಡಲಾಗಿದೆ. ಈಗ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ದಿನ ದೂಡುತ್ತಿದ್ದಾರೆ. ಆದರೆ ಇತ್ತೀಚೆಗೆ ನಡೆದ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದದ ಬಳಿಕ, ಮತ್ತೆ ಹುಬ್ಬಳ್ಳಿಯ ಈದ್ಗಾ ವಿವಾದ ಮತ್ತೆ ಮುನ್ನೆಲೆಗೆ ಬರುವ ಲಕ್ಷಣಗಳು ಸ್ಪಷ್ಟವಾಗಿವೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ವೇಳೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ರಾಣಿ ಚೆನ್ನಮ್ಮ ಈದ್ಗಾ ಮೈದಾನ ಗಜಾನನ ಉತ್ಸವ ಸಮಿತಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದೆ,ಇದು ಹೊಸದೊಂದು ವಿವಾದ ಹುಟ್ಟುಹಾಕುವ ಸಾಧ್ಯತೆ ದಟ್ಟವಾಗಿದೆ. ನಾಳೆಯ ನಿರ್ಧಾರದಲ್ಲಿ ಏನಾದರೂ ಅನುಮತಿ ಸಿಗದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿಯೇ ಗಣೇಶ ಉತ್ಸವಕ್ಕೆ ಅನುಮತಿ ನೀಡುವಂತೆ ಹೋರಾಟ ನಡೆಸಿರುವ ಹಿಂದೂಗಳು, ಹೊಸದಾಗಿ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಆಚರಣೆ ರೂಪರೇಷೆಗಳನ್ನು ಚೆರ್ಚಿಸಲು ನಾಳೆ ನಡೆಯುವ ಸಾಮಾನ್ಯ ಸಭೆ ಕರೆಯಲಾಗಿದೆ. ಇಂತಹದೊಂದು ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪಾಲಿಕೆ ಯಾವ ರೀತಿ ಕ್ರಮ ಕೈಗೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/08/2022 10:01 pm