ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅತಿಥಿ ಉಪನ್ಯಾಸಕರ ಗೋಳು ಕೇಳುವವರು ಯಾರು? ಕರ್ತವ್ಯದಲ್ಲೇ ಸಾವನ್ನಪ್ಪಿದರೂ ಸರ್ಕಾರ ಮಾತ್ರ ಡೋಂಟ್ ಕೇರ್

ಹುಬ್ಬಳ್ಳಿ: ಅದೆಷ್ಟೋ ವಿದ್ಯಾರ್ಥಿಗಳಿಗೆ ದಾರಿ ದೀಪವಾದವರು ಇವರು, ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಬೋಧಿಸುವ ಶಿಕ್ಷಕರು, ಆದ್ರೆ ಈ ಗುರುಗಳಿಗೆ ಸರ್ಕಾರದಿಂದ ಸರಿಯಾದ ಸೌಕರ್ಯಗಳು ಸಿಗುತ್ತಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.

ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ, ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ಎನ್ನುತ್ತಾರೆ. ಆದರೆ ಎಷ್ಟೋ ಮಕ್ಕಳಿಗೆ ಅಕ್ಷರ ಜ್ಞಾನ ಹೇಳುವ ಈ ಅತಿಥಿ ಉಪನ್ಯಾಸಕರ ಗೋಳನ್ನು ಯಾರು ಕೇಳುತ್ತಿಲ್ಲ.

ಹೌದು, ರಾಜ್ಯದಲ್ಲಿ ಸುಮಾರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹುತೇಕ ಅತಿಥಿ ಉಪನ್ಯಾಸಕರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅತಿ ಕಡಿಮೆ ವೇತನದಲ್ಲಿ ಇವರು ತಮ್ಮ ಜೀವನ ಕುಟುಂಬದ, ಬದುಕಿನ ಜಟಕಾ ಬಂಡಿಯನ್ನು ಓಡಿಸಬೇಕು. ಇವರಿಗೆ ಸರ್ಕಾರದಿಂದ ಯಾವುದೇ ರೀತಿಯ ಭದ್ರತೆ ಇಲ್ಲದೆ ಇರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದುರ್ದೈವದ ಸಂಗತಿಯಾಗಿದೆ. ಸರ್ಕಾರದ ವಿರುದ್ಧ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ರಸ್ತೆಗಿಳಿದು ಅದೆಷ್ಟೋ ಹೋರಾಟ ಮಾಡಿದ್ದಾರೆ. ಆದರೆ ಸರ್ಕಾರ ಮಾತ್ರ ಈ ಅತಿಥಿ ಉಪನ್ಯಾಸಕರತ್ತ ಗಮನ ಹರಿಸುತ್ತಿಲ್ಲವೆಂದು ಈ ಶಿಕ್ಷಕರ ಗೋಳಾಗಿದೆ.

ಬೈಟ್- ಡಾ. ಹನಮಂತಗೌಡ ಕಲ್ಮನಿ, ಸಂಘದ ರಾಜ್ಯಾಧ್ಯಕ್ಷ

ಇನ್ನು ಕರ್ತವ್ಯದಲ್ಲಿರುವಾಗ ಅದೆಷ್ಟೋ ಅತಿಥಿ ಉಪನ್ಯಾಸಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ಕಣ್ಣಿಗೆ ಕಂಡರು ಕಾಣದಂತೆ ವರ್ತಿಸುತ್ತಿದೆ. ಕಳೆದ ಒಂದು ವಾರದ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. ಶಿವಾನಂದ ಕಲ್ಲೂರು ಅವರು ಸವದತ್ತಿಯ ಕೆ.ಎಂ ಮಾಮಿನಿ ಸರ್ಕಾರಿ ಕಾಲೇಜಿನಲ್ಲಿ ಕರ್ತವ್ಯನಿರತ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹುಬ್ಬಳ್ಳಿಯ ಇನ್ನೋರ್ವ ಅತಿಥಿ ಉಪನ್ಯಾಸಕಿ ಶ್ರೀಯಾಂಕ್ ಪಾಟೀಲ್ ಇದೇ 27ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ್ ಎಂಬುವವರು ಸಾವನ್ನಪ್ಪಿದ್ದಾರೆ. ಹೀಗೆ ರಾಜ್ಯದಲ್ಲಿ ಸಾಕಷ್ಟು ಅತಿಥಿ ಉಪನ್ಯಾಸಕರು ಸಾವನ್ನಪ್ಪಿದ್ದಾರೆ. ಆದ್ರೆ ಸರ್ಕಾರದಿಂದ ಈ ಕುಟುಂಬಕ್ಕೆ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಸುಮಾರು ವರ್ಷಗಳಿಂದ ಅತಿಥಿ ಶಿಕ್ಷಕರು ವಿದ್ಯಾರ್ಥಿಗಳಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ. ಇತ್ತೀಚೆಗೆ ನಿಧನರಾದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ...

Edited By : Somashekar
Kshetra Samachara

Kshetra Samachara

01/09/2022 04:54 pm

Cinque Terre

29.27 K

Cinque Terre

0

ಸಂಬಂಧಿತ ಸುದ್ದಿ