ನವಲಗುಂದ : 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಆಗಸ್ಟ್ 13 ಮುಂಜಾನೆ ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಬೇಕು ಎಂದು ಕೇಂದ್ರ ಸರ್ಕಾರ ಅಭಿಯಾನ ರೂಪಿಸಿದೆ.
ಆದರೆ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾನವಾಡ ಗ್ರಾಮದಲ್ಲಿ ಧ್ವಜಾರೋಹಣ ಮಾಡಲಾಗಿಲ್ಲ ಎಂದು ಜನರು ಆಕ್ರೋಶಗೊಂಡಿದ್ದರು.
ನವಲಗುಂದ ತಾಲೂಕಿನ ಶಾನವಾಡ ಗ್ರಾಮದಲ್ಲಿ ಹಳೆಯ ಗ್ರಾಮ ಪಂಚಾಯತ್ ಕಚೇರಿ ಇದೆ. ಅಲ್ಲಿ ಗ್ರಾಮ ಪಂಚಾಯತ್ ಕಾರ್ಯಕ್ರಮಗಳನ್ನು ನಡೆಸಲಾಗುತ್ತಂತೆ, ಇಲ್ಲಿ ಧ್ವಜದ ಕಂಬ ಇದ್ದರೂ ಸಹ ಇಲ್ಲಿ ಧ್ವಜಾರೋಹಣ ಮಾಡಲಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು.
ಆದರೆ ಹಾಲಕುಸುಗಲ್ ಗ್ರಾಮದಲ್ಲಿನ ಗ್ರಾಮ ಪಂಚಾಯತ್ ಕಾರ್ಯಾಲಯದ ಎದುರು ಧ್ವಜಾರೋಹಣ ಮಾಡಲಾಗಿದೆ ಎಂದು ಅಧ್ಯಕ್ಷರಾದ ಮೌಲಾಸಾಬ್ ಖುದನ್ನವರ ಪಬ್ಲಿಕ್ ನೆಕ್ಸ್ಟ್‌ಗೆ ತಿಳಿಸಿದರು. ನಂತರ ಶಾನವಾಡ ಗ್ರಾಮದಲ್ಲಿಯೂ ಗ್ರಾಮ ಪಂಚಾಯತ್ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.
Kshetra Samachara
13/08/2022 12:03 pm