ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಗಿರಿಯಾಲ ಗ್ರಾಮದ ಶಿಳ್ಳಿಕೇತರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ಅಲೆಮಾರಿ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೇ ವಂಚನೆ ಮಾಡುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳು ವಂಚಿಸುತ್ತಿದ್ದಾರೆ. ಕೂಡಲೇ ಒಂದು ವಾರದೊಳಗಾಗಿ ಶಿಳ್ಳಿಕೇತರಿಗೆ ಎಸ್.ಸಿ ಪ್ರಮಾಣ ಪತ್ರ ನೀಡದಿದ್ದರೆ ಉಗ್ರವಾದ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದರು.
Kshetra Samachara
18/08/2022 03:28 pm