ಧಾರವಾಡ: ಸೇವಾ ಭದ್ರತೆ ನೀಡುವುದು, ಪದನಾಮ ಬದಲಾವಣೆ ಮಾಡುವುದು ಹಾಗೂ ವೇತನ ಹೆಚ್ಚಳ ಮಾಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕವಿವಿಯ ಸಿಂಡಿಕೇಟ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಇಂದು ಸಿಂಡಿಕೇಟ್ ಸಭೆ ನಡೆಸಲಾಗುತ್ತಿತ್ತು. ಈ ಸಭೆಯಲ್ಲಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆ ಮಾಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಕಚೇರಿಗೆ ಮುತ್ತಿಗೆ ಹಾಕಿ ಸಿಂಡಿಕೇಟ್ ಸದಸ್ಯರಿಗೆ ಒತ್ತಾಯ ಮಾಡಿದರು.
ಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತಲಾಗುವುದು. ಒಂದು ವೇಳೆ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯದೇ ಹೋದರೆ ನಾವೂ ಕೂಡ ಸಭೆಯಿಂದ ಹೊರಬರುತ್ತೇವೆ ಎಂದು ಸಿಂಡಿಕೇಟ್ ಸದಸ್ಯರು ಅತಿಥಿ ಉಪನ್ಯಾಸಕರಿಗೆ ಭರವಸೆ ನೀಡಿದರು.
Kshetra Samachara
20/08/2022 01:59 pm