ಧಾರವಾಡ : ರಾಜ್ಯದಾದ್ಯಂತ ಅತಿವೃಷ್ಟಿ ಉಂಟಾಗಿ ಇಡೀ ರೈತ ಸಮುದಾಯ ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದು, ರಾಜ್ಯ ಬಿಜೆಪಿ ಸರ್ಕಾರ ರೈತರ ನೆರವಿಗೆ ಬರದೇ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿ ರೈತರ ಬೆಳೆಗಳು ಸಂಪೂರ್ಣ ನಾಶವಾಗಿವೆ. ಹೀಗಿರುವಾಗ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕಿತ್ತು. ಅಲ್ಲದೇ ರೈತರಿಗೆ ಬರಬೇಕಾದ ಬೆಳೆ ವಿಮೆ ಕೂಡ ಇನ್ನೂ ಬಂದಿಲ್ಲ. ಕೂಡಲೇ ರಾಜ್ಯ ಸರ್ಕಾರ ರಾಜ್ಯದ ರೈತರು ಹಾಗೂ ಜನರ ನೆರವಿಗೆ ಬರಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಹಾಗೂ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
09/09/2022 02:20 pm