ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮನೆ ಕಳೆದುಕೊಂಡ ನೆರೆ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಒತ್ತಾಯ

ಧಾರವಾಡ: ವಿಪರೀತ ಮಳೆಯಿಂದಾಗಿ ಧಾರವಾಡ ತಾಲೂಕಿನ ತೇಗೂರು ಗ್ರಾಮದಲ್ಲಿ ಅನೇಕ ಮನೆಗಳು ಸಂಪೂರ್ಣ ಹಾಳಾಗಿದ್ದು, ಜಿಲ್ಲಾಡಳಿತ ಮನೆ ಕಳೆದುಕೊಂಡ ಬಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ತೇಗೂರು ಗ್ರಾಮದ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಹಿಂದೆ ತೇಗೂರು ಗ್ರಾಮಕ್ಕೆ ಬಂದಿದ್ದ ಅಧಿಕಾರಿಗಳು, ಸರ್ವೆ ಮಾಡಿಕೊಂಡು ಮನೆ ಕಳೆದುಕೊಂಡವರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಆದರೆ, ಇದೀಗ ಯಾವುದೇ ಪರಿಹಾರ ನೀಡದೇ ವಿಳಂಬ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಸರ್ಕಾರ ಕೂಡಲೇ ಮನೆ ಕಳೆದುಕೊಂಡವರ ನೆರವಿಗೆ ಬರಬೇಕು ಎಂದು ತೇಗೂರು ಗ್ರಾಮದ ಗ್ರಾಮಸ್ಥರು ಒತ್ತಾಯಿಸಿದರು.

Edited By : Somashekar
Kshetra Samachara

Kshetra Samachara

21/09/2022 02:36 pm

Cinque Terre

73.02 K

Cinque Terre

2

ಸಂಬಂಧಿತ ಸುದ್ದಿ