ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಬೆಂಗಳೂರು, ರಾಮನಗರ, ದೆಹಲಿ, ಮುಂಬೈ ಸೇರಿದಂತೆ ಸುಮಾರು 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್ ಬಳಿ ಕಪ್ಪು ಬಟ್ಟೆ ಪಟ್ಟಿಕಟ್ಟಿಕೊಂಡು ಪ್ರತಿಭಟನೆ ನಡೆಸುತಿದ್ದಾರೆ.
ಉಪ ಚುನಾವಣೆ ಮತ್ತು ಪರಿಷತ್ ಬರುತಿದ್ದಂತೆ ಇಂತಹ ದಾಳಿ ನಡೆದಿದೆ. ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಸಕ್ರೀಯ ರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ದಾಳಿ ನಡೆಸಿರುವ ಉದ್ಧೇಶದಿಂದ ಪ್ರಜಾಪ್ರಭುತ್ವ ಕಗ್ಗೂಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
05/10/2020 01:38 pm