ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ವಿನಯ್ ಅವರು ಬಂಧನಕ್ಕೊಳಗಾಗಿ ಮೂರು ತಿಂಗಳಾಗುತ್ತ ಬಂದಿದ್ದು, ಅವರು ಜಾಮೀನಿಗಾಗಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರ ಅರ್ಜಿ ವಜಾಗೊಂಡ ನಂತರ ಹೈಕೋರ್ಟ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಕೂಡ ವಿನಯ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ವಿನಯ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾದ ಅನಿವಾರ್ಯತೆ ಎದುರಾಗಿದೆ.
ವಿನಯ ಪರ ವಕೀಲ ಶಶಿಕಿರಣ ಶೆಟ್ಟಿ ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೆ.ಎನ್.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ವಿನಯ್ ಅವರ ಅರ್ಜಿಯನ್ನೇ ವಜಾಗೊಳಿಸಿದೆ. ಇದೀಗ ಜಾಮೀನು ಸಿಗಬೇಕು ಎಂದರೆ ವಿನಯ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾದ ಅನಿವಾರ್ಯತೆ ಎದುರಾಗಿದೆ.
ಸಿಬಿಐ ಇನ್ನೂ ದೋಷಾರೋಪಣ ಸಲ್ಲಿಸದೇ ಇರುವುದರಿಂದ ಒಂದು ವೇಳೆ ದೋಷಾರೋಪಣ ಪಟ್ಟಿ ಸಲ್ಲಿಸಿದರೆ ವಿನಯ್ ಪರ ವಕೀಲರು ಮತ್ತೊಮ್ಮೆ ಜಾಮೀನಿಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
Kshetra Samachara
21/01/2021 01:01 pm