ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿನಯ್ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.
ಧಾರವಾಡದ ಹೆಬ್ಬಳ್ಳಿ ಅಗಸಿಯಲ್ಲಿ ವಿನಯ್ ಅಭಿಮಾನಿಗಳು ಬ್ಯಾಂಡ್ ಬಾರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಡ್ಯಾನ್ಸ್ ಮಾಡುವ ಮೂಲಕ ವಿನಯ್ ಅವರ ಪರವಾಗಿ ಘೋಷಣೆ ಕೂಗಿದರು.
ಮೊನ್ನೆಯಷ್ಟೇ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಕೊಲೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿತ್ತು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡ ಸಾಕ್ಷ್ಯ ನಾಶ ಪ್ರಕರಣದಲ್ಲೂ ವಿನಯ್ಗೆ ಜಾಮೀನು ಮಂಜೂರು ಮಾಡಿದೆ. ನಾಳೆ ವಿನಯ್ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
Kshetra Samachara
19/08/2021 06:20 pm