ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಸೂಚನೆ

ಧಾರವಾಡ: ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಪ್ರಕ್ರಿಯೆಯನ್ನು ಮುಂಬರುವ ಎರಡು ತಿಂಗಳುಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಧಾರವಾಡ ಹೈಕೋರ್ಟ್ ಪೀಠ ನಿರ್ದೇಶನ ನೀಡಿದೆ.

ಮೇ.9 ರಂದು ನಿಗದಿಯಾಗಿದ್ದ ಕಸಾಪ ಚುನಾವಣೆಯನ್ನು ಕೋವಿಡ್ ಎರಡನೇ ಅಲೆ ತೀವ್ರಗೊಂಡ ಕಾರಣ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ನಂತರ ಸಹಕಾರ ವಲಯ, ವಿವಿಧ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೈಗೊಂಡ ಬಳಿಕವೂ ಕಸಾಪ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ನಿರ್ಧಾರ ಪ್ರಕಟವಾಗಲಿಲ್ಲ. ಈ ಕುರಿತು ಕೇಂದ್ರ ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಶೇಖರಗೌಡ ಮಾಲಿಪಾಟೀಲ ಅವರು ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಕೋರಿದ್ದರು.

ನಂತರ ಧಾರವಾಡದ ನ್ಯಾಯವಾದಿಗಳಾದ ಶ್ರೀಹರ್ಷ ನಿಲೋಪಂತ್ ಮತ್ತು ಅವಿನಾಶ್ ಮಾಲಿಪಾಟೀಲ ಅವರ ಮೂಲಕ ಹೈಕೋರ್ಟ್ ಪೀಠಕ್ಕೂ ಒಂದು ರಿಟ್ ಅರ್ಜಿ ಸಲ್ಲಿಸಿದ್ದರು. ಶೇಖರಗೌಡ ಮಾಲಿಪಾಟೀಲ ಅವರ ಅರ್ಜಿ ಪರಿಗಣಿಸಿರುವ ಹೈಕೋರ್ಟ್ ಕಸಾಪ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳ ಅವಧಿಯೊಳಗೆ ಪೂರ್ಣಗೊಳಿಸಲು ನ್ಯಾಯಮೂರ್ತಿ ಕೃಷ್ಣಕುಮಾರ ಅವರಿದ್ದ ಏಕ ಸದಸ್ಯ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್ ನಿರ್ದೇಶನದ ಪ್ರತಿಯನ್ನು ಪಡೆದ ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಈ ಕುರಿತು ಮತ್ತೊಮ್ಮೆ ಲಿಖಿತ ಮನವಿ ಸಲ್ಲಿಸಲಾಗುವುದು. ನ್ಯಾಯಾಲಯದ ಈ ನಿರ್ದೇಶನ ಕನ್ನಡ ಕಟ್ಟುವ ಕೆಲಸಕ್ಕೆ ಬಲ ತುಂಬಿದೆ. ಅಡಳಿತ ಮಂಡಳಿಯೇ ಇಲ್ಲದೇ ಅಧಿಕಾರಿಗಳಿಂದ ಹೆಚ್ಚಿನ ಕೆಲಸಗಳು ಸದ್ಯಕ್ಕೆ ಕಸಾಪದಿಂದ ಸಾಧ್ಯವಿಲ್ಲ. ಹೀಗಾಗಿ ಕೂಡಲೆ ಸರ್ಕಾರ ಮತ್ತು ಚುನಾವಣಾ ಆಯೋಗ ಕ್ರಮ ವಹಿಸಬೇಕು ಎಂದು ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

15/09/2021 10:19 pm

Cinque Terre

39.52 K

Cinque Terre

0

ಸಂಬಂಧಿತ ಸುದ್ದಿ